ಮೈಸೂರು : ಒಕ್ಕಲಿಗ ಮುಖಂಡರ ಏಳಿಗೆ ಸಹಿಸದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಮತ್ತೊಮ್ಮೆ ಜೈಲಿಗೆ ಕಳುಹಿಸಲು ಸಂಚು ರೂಪಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಆರೋಪಿಸಿದರು.
ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಬಹಳ ಹತಾಶರಾಗಿ ಒತ್ತಡಕ್ಕೆ ಒಳಗಾಗಿ ಕಾಂಗ್ರೆಸ್ ನಾಯಕರ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಬಿಜೆಪಿ ಮೈತ್ರಿಯ ಮೊದಲ ಕಂಡಿಷನ್ ಡಿ.ಕೆ. ಶಿವಕುಮಾರ್ ಅವರನ್ನು ಜೈಲಿಗೆ ಕಳಹಿಸಬೇಕು ಎಂಬುದಾಗಿದೆ ಎಂದು ದೂರಿದರು.
ಕುಮಾರಸ್ವಾಮಿ ಅವರಿಗೆ ತಾಕತ್ತು ಧಮ್ ಇದ್ದರೆ ಜೈಲಿಗೆ ಕಳುಹಿಸಬೇಕು. ಡಿ.ಕೆ. ಶಿವಕುಮಾರ್ ಜೀವ ತೆಗೆಯುವ ಸಂಚು ರೂಪಿಸಿದ್ದಾರೆ. ಇದರ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿಗೆ ಮನವಿ ಕೊಡುತ್ತೇನೆ. ಕುಮಾರಸ್ವಾಮಿ ಅವರಿಗೆ ತನ್ನ ಅಣ್ಣನ ಮಗನ ಬೆಳವಣಿಗೆ ಸಹಿಸಲಾಗದು, ಭವಾನಿ ರೇವಣ್ಣ ಅವರಿಗೆ ಟಿಕೆಟ್ ತಪ್ಪಿಸಿದರು. ಹಿಂದೆ ಚೆಲುವರಾಯಸ್ವಾಮಿ, ಮಾಗಡಿ ಬಾಲಕೃಷ್ಣ ಬೆಳೆಯೋದು ಸಹಿಸಲಿಲ್ಲ. ಇದನ್ನು ಒಕ್ಕಲಿಗ ಸಮಾಜ ಅರ್ಥ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.