ಹಾಲಿ ಇರುವ ಕಾಂಗ್ರೆಸ್ ಸರ್ಕಾರ ಬೀಳುತ್ತೆ, ಮತ್ತೆ ರಾಜ್ಯದಲ್ಲಿ ಚುನಾವಣೆ ನಡೆಯುತ್ತೆ, ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರುತ್ತೆ ಎಂದು ಕುಮಾರಸ್ವಾಮಿ ಕನಸು ಕಾಣುವುದಾದರೆ ಕಾಣಲಿ. ಅವರ ಕನಸಿಗೆ ನಾವು ಅಡ್ಡಿ ಮಾಡುವುದಿಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ತಾಲೂಕಿನ ಬೆಳ್ಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, 2024ಕ್ಕೆ ಡಿ.ಕೆ.ಶಿವಕುಮಾರ್ ಜೈಲಿಗೆ ಹೋಗುತ್ತಾರೆ. ಚುನಾವಣೆ ನಂತರ ಈ ಸರ್ಕಾರ ಬಿದ್ದುಹೋಗಲಿದೆ ಎಂಬ ಭ್ರಮೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ತೇಲಾಡುತ್ತಿದ್ದಾರೆ. ಅದರಿಂದಲೇ ಕುಮಾರಸ್ವಾಮಿ ಅವರಿಗೆ ನಿದ್ರೆ ಬರುತ್ತೆ ಎನ್ನುವುದಾದರೆ ಅ ರೀತಿಯ ಕನಸು ಕಾಣಲಿ ಎಂದು ಕುಟುಕಿದರು.