ಮೈಸೂರು : ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಮೇಯರ್ ಶಿವಕುಮಾರ್ ಅವರು ವಿವಿಧ ದಸರಾ ಕಾಮಗಾರಿಗಳನ್ನು ಮಂಗಳವಾರ ಪರಿಶೀಲಿಸಿದರು.
ವಿಜಯದಶಮಿ ಜಂಬೂಸವಾರಿ ಮೆರವಣಿಗೆ ಸಾಗುವ ರಾಜಮಾರ್ಗದಲ್ಲಿ ಪರಿಶೀಲನೆಯನ್ನು ಅವರು ಅರಮನೆಯ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿಯಿಂದ ಆರಂಭಿಸಿದರು. ನಂತರ ಚಾಮರಾಜ ವೃತ್ತ, ಕೆ.ಆರ್. ವೃತ್ತ, ಚಿಕ್ಕಗಡಿಯಾರ ವೃತ್ತ, ದೇವರಾಜ ಮಾರುಕಟ್ಟೆ, ಸಯ್ಯಾಜಿರಾವ್ ರಸ್ತೆಯ ಸಬ್ ವೇ ಸೇರಿದಂತೆ ಇತರೆಡೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಪಾಲಿಕೆ ಆಯುಕ್ತ ಅಅಸಾದ್ ಉರ್ ರೆಹಮಾನ್ ಷರೀಫ್ ಮತ್ತು ಇತರೆ ಅಧಿಕಾರಿಗಳು ಇದ್ದರು.